HomeKarnatakaಶುಭ ಸುದ್ದಿ: 256 ಪಿಡಿಒ ನೇಮಕಾತಿಗೆ KPSCಗೆ ಪ್ರಸ್ತಾವನೆ; ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಶುಭ ಸುದ್ದಿ: 256 ಪಿಡಿಒ ನೇಮಕಾತಿಗೆ KPSCಗೆ ಪ್ರಸ್ತಾವನೆ; ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ 256 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಕಾಂಗ್ರೆಸ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರ ನೀಡಿ, ಗ್ರಾಮ ಲೆಕ್ಕಾಧಿಕಾರಿಗಳು, ಶಿಕ್ಷಕರು ಹಾಗೂ ಪಿಡಿಒಗಳನ್ನು ಶಾಸಕರು ಆಪ್ತ ಸಹಾಯಕರನ್ನಾಗಿ ನೇಮಿಸಿಕೊಳ್ಳುವುದನ್ನು ನಿಲ್ಲಿಸಿದಲ್ಲಿ ಜನರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕೆ 256 ಪಿಡಿಒಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿಗೆ ಸಂಬಂಧಿಸಿದಂತೆ ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular