ಕರ್ನಾಟಕ ಲೋಕಸೇವಾ ಆಯೋಗವು ಪಿಡಿಒ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೈದ್ರಾಬಾದ್-ಕರ್ನಾಟಕ ವೃಂದದ 97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:17-12-2025ರಂದು ಆಯೋಗದ ವೆಬ್ ಸೈಟ್ http://kpsc.kar.nic.in-Lists-Provisional Selection List ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಸದರಿ ತಾತ್ಕಾಲಿಕ ಆಯ್ಕೆಪಟ್ಟಿ ಸಂಬಂಧ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಈ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ಇವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ವಿಶಾಲ್ ಆರ್ ತಿಳಿಸಿದ್ದಾರೆ.


