BREAKING NEWS: ಹನುಮಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿಡಿಒ ಜೀವನ್ ಬಿ.ಎಂ. ಅವರನ್ನು ಅಮಾನತು ಮಾಡಲಾಗಿದೆ.

5 ಕಾರಣ ನೀಡಿ ಜಿಲ್ಲಾ ಪಂಚಾಯಿತಿ ಸಿಇಒ ತನ್ವೀರ್ ಆಸಿಫ್ ಸೇಠ್ ಸಸ್ಪೆಂಡ್ ಮಾಡಿದ್ದಾರೆ. ಗ್ರಾಮ ಪಂಚಾಯತಿ ಜಾಗ ಖಾಸಗಿಯವರಿಗೆ ನೀಡಲು ಸರ್ಕಾರದ ಅನುಮತಿ ಕಡ್ಡಾಯವಾಗಿದ್ದರೂ ನಿಯಮ ಉಲ್ಲಂಘಿಸಿ ಗ್ರಾಮ ಪಂಚಾಯಿತಿ ಜಾಗವನ್ನು ಖಾಸಗಿಯವರಿಗೆ ನೀಡಲಾಗಿದೆ. ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಒ ನೇರ ಕಾರಣ ಎಂದು ಆರೋಪಿಸಲಾಗಿದೆ.

ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಪಿಡಿಒ ಕರ್ತವ್ಯ ಲೋಪ ಎಸಗಿದ್ದಾರೆ. ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜವನ್ನು ಹಾರಿಸಲು ಅನುಮತಿ ನೀಡಿ ಷರತ್ತು ಉಲ್ಲಂಘಿಸಿದ್ದರೂ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ರಾಷ್ಟ್ರಧ್ವಜದ ಬದಲು ಹನುಮ ಧ್ವಜ ಹಾರಿಸಲು ಅವಕಾಶ ನೀಡಿರುವುದು, ಹನುಮಧ್ವಜ ಹಾರಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಪಿಡಿಒ ಜೀವನ್ ಅವರನ್ನು ಅಮಾನತು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read