ರಾಯಚೂರು: ಆರ್.ಎಸ್.ಎಸ್.ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗ್ರಾಮ ಪಂಚಾಯತ್ ಪಿಡಿಒ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪ್ರವೀಣ್ ಕುಮಾರ್ ಕೆ.ಪಿ ಅಮಾನತುಗೊಂಡಿರುವ ಪಿಡಿಒ. ರಾಯಚೂರು ಜಿಲ್ಲೆಯ ಸಿರಿವಾರದಲ್ಲಿ ಪ್ರವೀಣ್ ಕುಮಾರ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.