ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ನನ್ನಿವಾಳ ಗ್ರಾ.ಪಂ. ಪಿಡಿಒ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಎನ್. ಪಾಲಯ್ಯ ಅವರು ಗ್ರಾ.ಪಂ. ಸಿಬ್ಬಂದಿ ವೇತನ, 14 ಮತ್ತು 15ನೇ ಹಣಕಾಸು ಯೋಜನೆ ಅನುದಾನ, ಲೇ ಔಟ್‌ಗಳ ತೆರಿಗೆ ಹಾಗೂ ಶುಲ್ಕ ಸಂಗ್ರಹದ ವ್ಯವಹಾರದಲ್ಲಿ ಹಣಕಾಸಿನ ದುರಪಯೋಗ ತೋರಿದ್ದಾರೆ.

ಇದರ ಜೊತೆಗೆ ಕಿವುಡ ಹಾಗೂ ಮೂಗರ ನಿವೇಶನಗಳ ಹಂಚಿಕೆ, ವೈಯಕ್ತಿಕ ಲಾಭಕ್ಕಾಗಿ ಆಯಿಲ್ ಮಿಲ್, ಜಲ್ಲಿ ಕ್ರಷರ್‌ಗಳಿಗೆ ಕಡಿಮೆ ತೆರಿಗೆ ವಿಧಿಸಿ ಗ್ರಾ.ಪಂ.ಗೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪಕ್ಕೆ ಗುರಿಯಾಗಿದ್ದರು.

ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೀಡಿದ ನೋಟಿಸ್‌ಗೂ ಸರಿಯಾದ ಉತ್ತರ ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನಲೆಯಲ್ಲಿ ಚಳ್ಳಕೆರೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಿಂದ ವರದಿ ಪಡೆದು, ನಿಯಮಾನುಸಾರ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read