ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವರ್ಗಾವಣೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಖ್ ಖರ್ಗೆ ತಿಳಿಸಿದ್ದಾರೆ.

ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಪಿಡಿಒಗಳು ಒಪ್ಪಿಗೆ ಕೊಡುತ್ತಿಲ್ಲ. ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60 ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ಕಾರ್ಯನಿರ್ವಹಣೆಗೆ ದೊಡ್ಡ ಮಟ್ಟದಲ್ಲಿ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು. ಪಿಡಿಒಗಳ ವರ್ಗಾವಣೆಯಲ್ಲಿ ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಲು ಕೌನ್ಸೆಲಿಂಗ್‌ ಮೂಲಕವೇ  ವರ್ಗಾವಣೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

https://twitter.com/KarnatakaVarthe/status/1757726289811923180

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read