BIG NEWS: ಶಾಂತಿ, ಸುವ್ಯವಸ್ಥೆಗೆ ಧಕ್ಕೆ ವರದಿ: ವಿವಿಧೆಡೆ ಗಣೇಶ ಹಬ್ಬ ಆಚರಣೆ ನಿಷೇಧಿಸಿ ಆದೇಶ

ಬಳ್ಳಾರಿ: ಜಿಲ್ಲೆಯಲ್ಲಿ ಈ ವರ್ಷದ ಗಣೇಶ ಹಬ್ಬದ ಪ್ರಯುಕ್ತ ಕಂಪ್ಲಿ ಠಾಣಾ ವ್ಯಾಪ್ತಿಯ ನಂ.15 ಗೋನಾಳ ಮತ್ತು ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು ಹಾಗೂ ಈ ಸಂಬಂಧ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಜನಸಂದಣಿ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಈ ಗ್ರಾಮಗಳಲ್ಲಿ ಗಣೇಶ ಹಬ್ಬ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಯಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಿಸಲಾಗಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read