HomeKarnatakaBIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸುಮಾರು 8 ನವಿಲುಗಳ ಮೃತದೇಹ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನವಿಲುಗಳ ಮೃತದೇಹ ಕೊಂಡೊಯ್ದಿದ್ದಾರೆ.

ಮೃತ ನವಿಲುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ನವಿಲುಗಳಿಗೆ ವಿಷ ಹಾಕಿ ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular