HomeKarnatakaವಾಹನ ಸವಾರರಿಗೆ ಮುಖ್ಯ ಮಾಹಿತಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ನಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ನಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ ನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದು, ವಾಹನ ಸವಾರರಿಗೆ ಪರ್ಯಾಅಯ ಮಾರ್ಗ ಸೂಚಿಸಿದ್ದಾಅರೆ.

ಎಲಿವೇಟೆಡ್ ಫ್ಲೈಓವರ್‌ ನಲ್ಲಿ ಕೇಬಲ್ ದುರಸ್ತಿ ಮತ್ತು ಲೋಡ್ ಟೆಸ್ಟಿಂಗ್ ಕಾಮಗಾರಿ ಇಂದಿನಿಂದ ಆರಂಭವಾಗಿದ್ದು, ಮೇ 8ರ ವರೆಗೆ ಫ್ಲೈಓವರ್ ಬಂದ್ ಆಗಲಿದೆ. ಸಂಚಾರ ದಟ್ಟಣೆ ತಪ್ಪಿಸಲು ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಮೇ 5ರ ಬೆಳಗ್ಗೆ 5 ಗಂಟೆಯಿಂದ ಮೇ 8ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಬಂದ್ ಮಾಡುತ್ತಿದೆ. ಈ ಅವಧಿಯಲ್ಲಿ ಫ್ಲೈಓವರ್‌ನ ಎರಡೂ ಬದಿಗಳಲ್ಲಿ ಸಂಚಾರ ಇರುವುದಿಲ್ಲ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರು ಸಹಕರಿಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ವಿನಂತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರ್ಯಾಯ ಮಾರ್ಗಗಳು:

ನೆಲಮಂಗಲದಿಂದ ಬೆಂಗಳೂರು ನಗರದ ಕಡೆಗೆ ಬರುವವರು: ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫ್ಲೈಓವರ್ ಕೆಳಭಾಗದ ಎನ್.ಹೆಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್.ಆರ್.ಎಸ್ ಜಂಕ್ಷನ್ ಮಾರ್ಗವಾಗಿ ಗೊರಗುಂಟೆಪಾಳ್ಯ ಅಥವಾ ಜಾಲಹಳ್ಳಿ ಕ್ರಾಸ್ ತಲುಪಬಹುದು.

ಸಿ.ಎಂ.ಟಿ.ಐ ನಿಂದ ನೆಲಮಂಗಲ ಕಡೆಗೆ ಹೋಗುವವರು: ಫ್ಲೈಓವರ್ ಕೆಳಭಾಗದ ಸರ್ವಿಸ್ ರಸ್ತೆ ಮೂಲಕ ಎಸ್.ಆರ್.ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಹಾಗೂ 8ನೇ ಮೈಲಿ ದಾಟಿ ನೆಲಮಂಗಲ ಟೋಲ್ ಕಡೆಗೆ ಸಾಗಬಹುದು.

ಈ ಹಿಂದೆ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಈ ಪ್ರಕ್ರಿಯೆಯು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿತ್ತು. ಇದೀಗ ಇಂದಿನಿಂದ ಕಾಮಗಾರಿ ಆರಂಭವಾಗುತ್ತಿರುವುದರಿಂದ ಸರ್ವಿಸ್ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸವಾರರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪ್ರಯಾಣ ಬೆಳೆಸುವುದು ಸೂಕ್ತ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular