ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ್ಯಾರೂ ಅನಗತ್ಯ ಹೇಳಿಕೆಗಳನ್ನು ನೀಡದಂತೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ದಿಕ್ಕುತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೇಜ್ ಆಗುವ ಸಾಧ್ಯತೆ ಇದೆ ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರೊಯಿಸಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇದ್ದಾರೆ. ಗೃಹ ಸಚಿವರ ಹೊರತಿಪಡಿಸಿ ಬೇರೆ ಯಾವ ಸಚಿವರು ಅನಗತ್ಯ ಹೇಳಿಕೆ ಕೊಡುವುದು ಬೇಡ. ಮಾತು ಹೆಚ್ಚಾದರೆ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಸಿಎಂ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.