HomeAutoBIG NEWS: ಸೆ. 16 ರಿಂದಲೇ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಪ್ರಯೋಗ

BIG NEWS: ಸೆ. 16 ರಿಂದಲೇ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಪ್ರಯೋಗ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಕೇಂದ್ರ ಸರ್ಕಾರದ ನಿರ್ದೇಶನದ ಅನ್ವಯ 2019ರ ಏಪ್ರಿಲ್ 1ರ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಎರಡು ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದ್ದ ಹಿನ್ನಲೆಯಲ್ಲಿ ಕಳೆದ ವರ್ಷ ನವೆಂಬರ್ ನಲ್ಲಿ HSRP ಅಳವಡಿಕೆಗೆ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಗಡುವು ನೀಡಿತ್ತು.

ಆದರೆ, ವಾಹನ ಮಾಲೀಕರು ಆಸಕ್ತಿ ತೋರಿಸದ ಕಾರಣ 2024ರ ಫೆಬ್ರವರಿವರೆಗೆ ಗಡುವು ವಿಸ್ತರಿಸಲಾಗಿತ್ತು..ಹೆಚ್ಚಿನ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ಜುಲೈ ಮತ್ತು ಸೆಪ್ಟಂಬರ್ 15ಕ್ಕೆ ಎರಡು ಬಾರಿ ಗಡುವು ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಸೆಪ್ಟೆಂಬರ್ 15ಕ್ಕೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ಸೆ. 16ರಿಂದ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular