ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮನಾಥ್ ಅವರ ಪೀಠ, ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಇದೀಗ ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸುವ ಮೂಲಕ ಕರ್ನಾಟಕಕ್ಕೆ ಹಿನ್ನಡೆ ಆಗಿದೆ.
ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಾಧೀಕರಣ ರಚಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸಿದೆ. ಜಲವಿವಾದ ನ್ಯಾಯಾಧೀಕರಣ ರಚಿಸುವಂತೆ ಆದೇಶ ಹೊರಡಿಸಿದೆ. ಇದರಿಂದ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.
ಪೆನ್ನಾರ್ ನದಿ ಮತ್ತು ಅದರ ಉಪ ನದಿ ಮಾರ್ಕಾಂಡೇಯ ನದಿ ಪಾತ್ರದಲ್ಲಿ ಕರ್ನಾಟಕ ಸರಕಾರ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿತ್ತು. ಸುಪ್ರೀಂ ಕೋರ್ಟ್ ಆದೇಶದಿಂದ ಆ ಯೋಜನೆಗಳಿಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.
ಪೆನ್ನಾರ್ ನದಿ ಅಥವಾ ದಕ್ಷಿಣ ಪಿನಾಕಿನಿ ನದಿಯು ನಂದಿ ಬೆಟ್ಟಗಳಲ್ಲಿ ಹುಟ್ಟಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಜಲಮೂಲವಾಗಿದೆ. ಅಲ್ಲದೆ ದಕ್ಷಿಣ ಪಿನಾಕಿನಿ ನದಿಗೆ ಮಾರ್ಕಂಡೇಯ ನದಿ, ಯರಗೋಳ, ಕುಶಾವತಿ ಎಂಬ ಉಪನದಿಗಳೂ ಇವೆ. ಪೆನ್ನಾರ್ ನದಿಯು ಒಂದು ಹರಿವಿನ ದಿಕ್ಕು ಆಂಧ್ರಪ್ರದೇಶದ ಮೂಲಕ ಬಂಗಾಳಕೊಲ್ಲಿಯನ್ನು ಸೇರುತ್ತದೆ. ಇನ್ನೊಂದು ಭಾಗ ತಮಿಳುನಾಡಿನ ಮೂಲಕ ಬಂಗಾಳಕೊಲ್ಲಿಗೆ ಸೇರುತ್ತದೆ.