ಬಳ್ಳಾರಿ : ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಡಿ.18ರಂದು ಸಂಜೆ 4ಕ್ಕೆ ಬಳ್ಳಾರಿ ವಿಭಾಗ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.
ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದರೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ವಿಭಾಗೀಯ ಕಾರ್ಯಾಲಯ ಕೋಟೆ, ಬಳ್ಳಾರಿ, ಅವರಿಗೆ ಡಿ.18 ಮುಂಚಿತವಾಗಿ ತಲಪುವಂತೆ ಪತ್ರ ಮುಖೇನ ಅಥವಾ [email protected] ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.