ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪವ ಹಾಗೂ ಇತ್ಯಾದಿಗಳನ್ನು ನ.11 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:Pension Adalat on Nov. 13