ವೃದ್ದಾಪ್ಯ, ವಿಧವಾ ಯೋಜನೆ ಸೇರಿ ವಿವಿಧ ಪಿಂಚಣಿ ಫಲಾನುಭವಿಗಳ ಗಮನಕ್ಕೆ : ನ.30ರೊಳಗೆ ಈ ಕೆಲಸ ಮಾಡದಿದ್ದರೆ `ಪಿಂಚಣಿ’ ಸ್ಥಗಿತ!

 

ಬೆಂಗಳೂರು  :  ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳನ್ನು ಫಲಾನುಭವಿಗಳಿಗೆ ಆಧಾರ್ ಆಧಾರಿತ ನೇರ ಹಣ ಸಂದಾಯ (ಡಿಬಿಟಿ) ಯೋಜನೆ ಮೂಲಕ ಪಾವತಿಸಲು ಕಡ್ಡಾಯವಾಗಿ ಫಲಾನುಭವಿಗಳ ಬ್ಯಾಂಕ್/ಅಂಚೆ ಇಲಾಖೆಯ ಉಳಿತಾಯ ಖಾತೆಗೆ ಎನ್‍ಪಿಸಿಐ ಲಿಂಕ್ ಮಾಡಬೇಕಾಗಿರುತ್ತದೆ.

ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳಾದ ವೃದ್ದಾಪ್ಯ ಯೋಜನೆ, ವಿಧವಾ ಯೋಜನೆ, ಅಂಗವಿಕಲ  ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆಗಳ ಮಾಸಿಕ ಪಿಂಚಣಿಯನ್ನು ಡಿಬಿಟಿ ಮೂಲಕ ಪಾವತಿಸಲು ಸರ್ಕಾರ ನಿರ್ಧರಿಸಿರುತ್ತದೆ. ಪ್ರಯುಕ್ತ ಬ್ಯಾಂಕ್/ಅಂಚೆ ಖಾತೆಗೆ ಎನ್‍ಪಿಸಿಐ ಲಿಂಕ್ ಆಗದ ಫಲಾನುಭವಿಗಳ ಪಟ್ಟಿಯು ಆಧಾರ್ ಗ್ರಾಮ ಆಡಳಿತಾಧಿಕಾರಿ(ವಿಎ) ಕಚೇರಿಯಲ್ಲಿರುತ್ತದೆ. ಫಲಾನುಭವಿಗಳು ವಿಎ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ತಿಳಿಸಿದೆ.

ಒಂದು  ವೇಳೆ ನಿಮ್ಮೆ ಖಾತೆಯು ಎನ್‍ಪಿಸಿಐ ಲಿಂಕ್ ಆಗದಿದ್ದಲ್ಲಿ ಕೂಡಲೇ ತಮ್ಮ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು ಪಾಸ್ ಪುಸ್ತಕದೊಂದಿಗೆ ಸಂಬಂಧಿಸಿದ ಬ್ಯಾಂಕ್/ಅಂಚೆ ಇಲಾಖೆಗೆ ನವೆಂಬರ್ ಮಾಹೆಯ ಅಂತ್ಯದೊಳಗೆ ಭೇಟಿ ನೀಡಿ ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಲು ಕ್ರಮ ವಹಿಸುವಂತೆ ತಿಳಿಸಿದೆ. ನವೆಂಬರ್ ಮಾಹೆಯ ಅಂತ್ಯದೊಳಗೆ ಎನ್‍ಪಿಸಿಐ ಲಿಂಕ್ ಮಾಡದಿದ್ದಲ್ಲಿ ಪಿಂಚಣಿಯನ್ನು ಸ್ಥಗಿತಗೊಳ್ಳಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read