ಬ್ಯಾಕ್‌ಲಾಗ್ ಹುದ್ದೆಗಳ ಎದುರಾಗಿ ನೇಮಕಗೊಂಡ ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ಗಳಿಗೆ ಸಂಬಂಧಿಸಿದಂತೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ-247(ಎ) ರನ್ವಯ ಪಿಂಚಣಿ ಉದ್ದೇಶಕ್ಕಾಗಿ ಅರ್ಹತಾದಾಯಕ ಸೇವೆಯನ್ನು ಪರಿಗಣಿಸುವ ಕುರಿತು ಆದೇಶ ಹೊರಡಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ದಿನಾಂಕ:04.11.2015ರ ಆದೇಶದ ರೀತ್ಯಾ ಬ್ಯಾಕ್ ಲಾಗ್ ಹುದ್ದೆಗಳ ಎದುರಾಗಿ ನೇರ ನೇಮಕಾತಿ ಅಡಿಯಲ್ಲಿ ಆಯ್ಕೆಗೊಂಡ ಸಹಾಯಕ ಇಂಜಿನಿಯರ್‌ಗಳಿಗೆ ಹಾಗೂ ಕಿರಿಯ ಇಂಜಿನಿಯರ್‌ಗಳಿಗೆ ಮತ್ತು ಸೂಪರ್‌ನ್ಯೂಮರರಿ ಹುದ್ದೆಯಲ್ಲಿ ಪರಿಗಣಿಸಿರುವ ಸಹಾಯಕ ಇಂಜಿನಿಯರ್‌ಗಳಿಗೆ ಹಾಗೂ ಕಿರಿಯ ಇಂಜಿನಿಯರ್ ಗಳಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ನಿಯಮ 247(ಎ) ರನ್ನಯ ಗರಿಷ್ಠ 2(ಎರಡು ವರ್ಷ) ವರ್ಷಗಳ ಅರ್ಹತಾದಾಯಕ ಸೇವೆಯನ್ನು ಪಿಂಚಿಣಿ ಉದ್ದೇಶಕ್ಕಾಗಿ ಮಂಜೂರು ಮಾಡಲು ಉಲ್ಲೇಖಿತ(3) ರಲ್ಲಿ ಇಲಾಖಾ ಮುಖ್ಯಸ್ಥರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ವರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ತಮ್ಮನ್ನು ಕೋರಲು ನಿರ್ದೇಶಿತನಾಗಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ (ಸೇವೆಗಳು-ಬಿ) ವಿ.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.




