HomeKarnatakaBREAKING: ಪಿಂಚಣಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ವಾರ್ಷಿಕ ಆದಾಯ ಮಿತಿ 1.20 ಲಕ್ಷ ರೂ.ಗೆ ಹೆಚ್ಚಳ

BREAKING: ಪಿಂಚಣಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ವಾರ್ಷಿಕ ಆದಾಯ ಮಿತಿ 1.20 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಪಿಂಚಣಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗಿದೆ.

ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರ ರೂ.ನಿಂದ 1.20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. 1.20 ಲಕ್ಷ ರೂಪಾಯಿವರೆಗಿನ ಆದಾಯ ಹೊಂದಿದವರಿಗೆ ಪಿಂಚಣಿ ಮುಂದುವರಿಸಲಾಗುವುದು ಎಂದು ಹೇಳಲಾಗಿದೆ.

ಕರ್ನಾಟಕ ಸರ್ಕಾರವು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ(ಹಿರಿಯ ನಾಗರಿಕರು, ವಿಧವೆಯರು, ವಿಕಲಚೇತನರ ಪಿಂಚಣಿ ಇತ್ಯಾದಿ) ಫಲಾನುಭವಿಗಳ ಅರ್ಹತೆಗೆ ಸಂಬಂಧಿಸಿದಂತೆ ಆದಾಯ ಮಿತಿಯ ಕುರಿತು ಕ್ರಮ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಆದಾಯ ಮಿತಿ: ಪ್ರಸ್ತುತ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಪಡೆಯಲು ವಾರ್ಷಿಕ ಕುಟುಂಬ ಆದಾಯದ ಮಿತಿ ₹32,000 ಆಗಿದೆ. ಇದನ್ನು ಹೆಚ್ಚಳ ಮಾಡಬೇಕೆಂದು ಒತ್ತಾಯ ಕೇಳಿ ಬಂದಿತ್ತು.

ಬಿಪಿಎಲ್ ಚೀಟಿಗೆ ನೀಡುವ ₹3 ಲಕ್ಷ ಆದಾಯ ಮಿತಿಯನ್ನೇ ಸಾಮಾಜಿಕ ಪಿಂಚಣಿ ಯೋಜನೆಗಳಿಗೂ ಅನ್ವಯಿಸಿ, ₹32,000 ಆದಾಯ ಮಿತಿಯನ್ನು ತಕ್ಷಣವೇ ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದರು. ಆದಾಯ ಮಿತಿ ಕಾರಣಕ್ಕೆ ಅನೇಕ ಫಲಾನುಭವಿಗಳ ಪಿಂಚಣಿ ರದ್ದಾಗಿತ್ತು. ಇದೀಗ ಪಿಂಚಣಿ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ಹೆಚ್ಚಳ ಮಾಡಲಾಗಿದೆ.

ಆದಾಯ ಮಿತಿ ಹೆಚ್ಚಳ ಆದೇಶ

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಆದೇಶ ಹೊರಡಿಸಿದ್ದೇವೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದುವೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಅದನ್ನು ₹1,20,000 ಗಳಿಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ.

ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್‌ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು.

ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಗ್ರಾಮ ಆಡಳಿತಾಧಿಕಾರಿಗಳು ಸಂಯೋಜನೆ ಮೊಬೈಲ್‌ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು ₹32,000 ಕ್ಕಿಂತ ಹೆಚ್ಚಿರುವುದು ಕಂಡುಬಂತು.

23,14,544 ಮಂದಿಯ ಪೈಕಿ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಈ ಮೊದಲು ಸೂಚಿಸಿದ್ದೆ.

ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.

 https://twitter.com/DrParameshwara/status/2090074858306871309

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular