GOOD NEWS : ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್ :  ‘NPS ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ |Govt Employees

ಬೆಂಗಳೂರು : ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ನಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್.ಪಿ.ಎಸ್.) ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
ಮೇಲೆ ಓದಲಾದ (2) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ನಲ್ಲಿ ಅವರ ಕುಟುಂಬಕ್ಕೆ ಇಡಿಗಂಟಿನ ಪರಿಹಾರ ಸೌಲಭ್ಯವನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ (3) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಮೃತರ ನಾಮನಿರ್ದೇಶಿತರಿಗೆ ಕುಟುಂಬ ಪಿಂಚಣಿಯನ್ನು ಮೃತರ ನಾಮನಿರ್ದೇಶಿತರು ಆಯ್ಕೆ ಮಾಡಿಕೊಂಡಲ್ಲಿ ಮೃತ ನೌಕರರ ಪ್ರಾನ್ ಖಾತೆಯಲ್ಲಿರುವ ಸಂಪೂರ್ಣ ಮೊತ್ತವನ್ನು ಸರ್ಕಾರವು ಹಿಂಪಡೆಯುವ ಷರತ್ತಿಗೊಳಪಟ್ಟು ಕರ್ನಾಟಕ ಸರ್ಕಾರಿ ನೌಕರರ (ಕುಟುಂಬ ಪಿಂಚಣಿ) ನಿಯಮಗಳು, 2002ರನ್ವಯ ಕುಟುಂಬ ಪಿಂಚಣಿ ಸೌಲಭ್ಯವನ್ನು ದಿನಾಂಕ:01.04.2018ರಿಂದ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ ಮತ್ತು ಓದಲಾದ (4) ರ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಮೇಲೆ ಓದಲಾದ (5) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ದಿನಾಂಕ: 01.04.2018ರಂದು ಮತ್ತು ತದನಂತರ ಸೇವೆಯಲ್ಲಿರುವಾಗಲೇ ಮೃತರಾದ ಸಂದರ್ಭದಲ್ಲಿ ನೌಕರರ ನಾಮನಿರ್ದೇಶಿತರು ಕುಟುಂಬ ಪಿಂಚಣಿಯನ್ನು ಆಯ್ಕೆ ಮಾಡಿಕೊಂಡಲ್ಲಿ ಪ್ರಾನ್ ಖಾತೆಯಲ್ಲಿ ಶೇಖರಣೆಗೊಂಡಿರುವ ಮೊತ್ತದಲ್ಲಿ ಮೃತ ನೌಕರರ ವಂತಿಗೆ ಮತ್ತು ಅದರ ಮೇಲಿನ ಆದಾಯವನ್ನು ಮೃತರ ನಾಮನಿರ್ದೇಶಿತರಿಗೆ ಇತ್ಯರ್ಥಪಡಿಸಲು ಹಾಗೂ ಸರ್ಕಾರದ ವಂತಿಗೆ ಮತ್ತು ಅದರ ಮೇಲಿನ ಆದಾಯವನ್ನು ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮೆ ಮಾಡಲು ಆದೇಶಿಸಿದೆ.

ಮೇಲೆ ಓದಲಾದ (6) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳನ್ನು ಸರ್ಕಾರಿ ಆದೇಶ ಸಂಖ್ಯೆ: ಆಇ 34 ಪಿಇಎನ್ 2018, ದಿನಾಂಕ: 23.06.2018 ರಲ್ಲಿ ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಆದೇಶಿಸಿರುವುದನ್ನು ಮಾರ್ಪಡಿಸಿ, ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳನ್ನು ದಿನಾಂಕ: 01.04.2006ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಿ ಆದೇಶಿಸಲಾಗಿದೆ.

ಪ್ರಸ್ತುತ ಮಹಾಲೇಖಪಾಲರು, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಖಾತೆಯನ್ನು ಪಡೆಯುವ ಮುಂಚಿತವಾಗಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಪ್ರಕರಣಗಳಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಬಗ್ಗೆ, ಸರ್ಕಾರಿ ಆದೇಶ ನೀಡುವಂತೆ ತಿಳಿಸಿ ಪ್ರಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿರುವುದನ್ನು ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/ 132 /2025, ಬೆಂಗಳೂರು, ದಿನಾಂಕ: 23.6.2025.
ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆ ಪಡೆಯುವ/ಹಂಚಿಕೆಯಾಗುವ ಮೊದಲೇ ಮೃತರಾದ ಪ್ರಕರಣಗಳಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಸಂಬಂಧ ಸರ್ಕಾರಿ ಆದೇಶ ಸಂಖ್ಯೆ: ಆಇ 34 ಪಿಎಇನ್ 2018, ದಿನಾಂಕ: 23.6.2018 ಮತ್ತು ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/149/2022, ದಿನಾಂಕ: 19.10.2022 ರ ಯ ಪರಿಶೀಲಿಸಿ, ಮೃತ ಅಧಿಕಾರಿ/ನೌಕರರು ಕಾರ್ಯನಿರ್ವಹಿಸುತ್ತಿರುವ ಇಲಾಖೆಗೆ ಸಂಬಂಧಿಸಿದ ಡಿಡಿಓ ರವರು ಮೃತ ಅಧಿಕಾರಿ/ನೌಕರರು ಪ್ರಾನ್ ಪಡೆಯದಿರುವ ಕುರಿತು ಇಲಾಖಾ ಮುಖ್ಯಸ್ಥರ ದೃಢೀಕರಣವನ್ನು ಪಡೆದು, ಕುಟುಂಬ ಪಿಂಚಣಿ ಮಂಜೂರು ಮಾಡುವ ಪ್ರಸ್ತಾವನೆಯನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಕ್ರಮವಹಿಸುವಂತೆ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read