HomeIndiaBIG NEWS: 8ನೇ ವೇತನ ಆಯೋಗ ರಚನೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ ಸರ್ಕಾರ...

BIG NEWS: 8ನೇ ವೇತನ ಆಯೋಗ ರಚನೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪಿಂಚಣಿ ವ್ಯವಸ್ಥೆ ಪರಿಶೀಲನಾ ಸಮಿತಿ ಇನ್ನೂ ವರದಿ ಸಲ್ಲಿಸಬೇಕಿದೆ. 8ನೇ ಕೇಂದ್ರ ವೇತನ ಆಯೋಗಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ತಿಳಿಸಿದೆ.

ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ಸರ್ಕಾರಿ ನೌಕರರಿಗೆ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ತನ್ನ ಅಂತಿಮ ವರದಿಯನ್ನು ಸಲ್ಲಿಸಿಲ್ಲ ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 8 ನೇ ಕೇಂದ್ರ ವೇತನ ಆಯೋಗವನ್ನು ರಚಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ.

ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಲು ಮತ್ತು ಒಪಿಎಸ್ ಅನ್ನು ಪುನಃಸ್ಥಾಪಿಸಲು ವಿವಿಧ ವಲಯಗಳಿಂದ ಕಾಲಕಾಲಕ್ಕೆ ಮನವಿ ಸ್ವೀಕರಿಸಲಾಗಿದೆ. ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ರಚಿಸಲಾದ ಸಮಿತಿಯ ಮುಂದೆ ಅದೇ ಮನವಿ ಇರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular