HomeKarnatakaಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿದ ದಾವಣಗೆರೆ ಜಿಲ್ಲೆಯ ಜನ: ನೆರವಿಗೆ ತುರ್ತು ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿದ ದಾವಣಗೆರೆ ಜಿಲ್ಲೆಯ ಜನ: ನೆರವಿಗೆ ತುರ್ತು ಕ್ರಮ

ದಾವಣಗೆರೆ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಪ್ರಸ್ತುತ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಇರಾನ್, ಇಸ್ರೇಲ್, ಯುಎಇ ಸೇರಿದಂತೆ ಹಲವು ದೇಶಗಳ ವಾಯುಪ್ರದೇಶವನ್ನು ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಒಟ್ಟು 9 ನಾಗರಿಕರು ಪ್ರಸ್ತುತ ಯುಎಇ (ದುಬೈ) ನಲ್ಲಿ ಸಿಲುಕಿಕೊಂಡಿರುವುದು ವರದಿಯಾಗಿದೆ. 

ದಾವಣಗೆರೆ ಜಿಲ್ಲೆಯ ಸಂಕಷ್ಟದಲ್ಲಿರುವ ನಾಗರಿಕರ ನೆರವಿಗಾಗಿ ಜಿಲ್ಲಾಡಳಿತವು ಈ ಕೆಳಗಿನ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವು 24×7 ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಜಿಲ್ಲೆಯ ಪ್ರಯಾಣಿಕರು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ನೆರವಿಗಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಸಂಖ್ಯೆ 08192-234034 ಸಂಖ್ಯೆಗೆ ಸಂಪರ್ಕಿಸಬಹುದು. 

ಬಾಧಿತ ದೇಶಗಳಲ್ಲಿರುವ ದಾವಣಗೆರೆಯ ನಾಗರಿಕರು ಭಾರತೀಯ ರಾಯಭಾರ ಕಚೇರಿ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಕೂಡಲೇ ಸಾರಥಿ ಸಹಾಯತಾ (Sarthi Sahayata) ಪೋರ್ಟಲ್ ((https://www.meaers.com/request/home) ) ನಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. 

ಸಹಾಯವಾಣಿಗಳು:

ಯುಎಇ ನಲ್ಲಿರುವವರು ರಾಯಭಾರ ಕಚೇರಿಯ ಸಹಾಯವಾಣಿ ಸಂಖ್ಯೆ 800-46342 ಅಥವಾ ವ್ಯಾಟ್ಸಾಪ್ ಸಂಖ್ಯೆ +9715430 90571 ಅನ್ನು ಸಂಪರ್ಕಿಸಬಹುದಾಗಿದೆ. 

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ಈಗಾಗಲೇ ಜಿಲ್ಲೆಯಿಂದ ಬಂದ ಮಾಹಿತಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಹೆಚ್ಚಿನ ಕ್ರಮಕ್ಕಾಗಿ ರವಾನಿಸಿದೆ. ಪರಿಸ್ಥಿತಿಗೆ ಅನುಗುಣವಾಗಿ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular