ಕಾಂಗ್ರೆಸ್ ನಾಯಕರ ಕುರ್ಚಿ ಕಿತ್ತಾಟಕ್ಕೆ ರಾಜ್ಯದ ಜನ ಬೇಸರ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಿತ್ತಾಟಕ್ಕೆ ರಾಜ್ಯದ ಜನ ಬೇಸರಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದ ಸರ್ಕಾರ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯಲ್ಲಿ ಮುಳುಗಿದೆ. ಕಾಂಗ್ರೆಸ್ ನಾಯಕರು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದು, ರಾಜ್ಯದ ಜನ ಬೇಸತ್ತಿದ್ದಾರೆ ಎಂದು ಹೇಳಿದ್ದಾರೆ.

ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಹೇಳುವ ಸ್ಥಿತಿ ಬಂದಿದೆ. ಆಡಳಿತ ಪಕ್ಷದಲ್ಲಿಯೇ ಮುಖ್ಯಮಂತ್ರಿ ಬಗ್ಗೆ ವಿಶ್ವಾಸ ಇಲ್ಲವಾಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ದೂರಿದ್ದಾರೆ.

ಹೇಳಿಕೆ, ಪ್ರತಿ ಹೇಳಿಕೆಗಳನ್ನು ನಿಲ್ಲಿಸದಿದ್ದಲ್ಲಿ ಆಡಳಿತ ಮೇಲೆ ಪರಿಣಾಮ ಬೀರುತ್ತದೆ ಎಂದು ಗೃಹ ಸಚಿವ ಪರಮೇಶ್ವರ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಮುಖ್ಯಮಂತ್ರಿ ಬದಲಾಗುತ್ತಾರಾ? ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಆಸಕ್ತಿ ಇಲ್ಲ. ಇವರ ಒಳ ಜಗಳದಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read