HomeKarnatakaBREAKING NEWS: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮತ್ತೋರ್ವ ಗಾಯಾಳು ಸಾವು

BREAKING NEWS: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮತ್ತೋರ್ವ ಗಾಯಾಳು ಸಾವು

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋಡೌನ್ ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

15 ವರ್ಷದ ಸಾಜಿದ್ ಪಾಷಾ ಮೃತ ಬಾಲಕ. ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್ ಪಾಷಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾನೆ.

ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂರು ದಿನಗಳ ಹಿಂದೆ ಭೀಕರ ಬೆಂಕಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಜೀವದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಗಾಯಾಳುಗಳಲ್ಲಿ ಇದೀಗ ಇನ್ನೋರ್ವ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular