HomeKarnatakaBIG NEWS: 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದ ದಿನಗೂಲಿ ನೌಕರರ ಸೇವೆ ಕಾಯಂ:...

BIG NEWS: 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದ ದಿನಗೂಲಿ ನೌಕರರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ರೇಷ್ಮೆ, ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲದಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಆದೇಶಿಸಿದೆ.

ಅರ್ಜಿದಾರರನ್ನು ಮೂರು ತಿಂಗಳಲ್ಲಿ ಸೂಕ್ತ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಡಕೋಳದ ಶಾಂತಲಕ್ಷ್ಮಿ ಮತ್ತು 30ಕ್ಕೂ ಅಧಿಕ ಮಂದಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಗಳನ್ನು ಮಾನ್ಯ ಮಾಡಿದ ಹೈಕೋರ್ಟ್, ಇಲಾಖೆಗಳು ಅರ್ಜಿದಾರರ ಸೇವೆ ಕಾಯಂಗೆ ಅರ್ಹರಲ್ಲ ಎಂದು 2010ರ ಜೂನ್ 14 ಮತ್ತು 2012 ರ ಜೂನ್ 15 ರಂದು ನೀಡಿದ್ದ ಹಿಂಬರಹಗಳನ್ನು ರದ್ದು ಮಾಡಿದೆ. 2002/2005ರ ನಿಯಮಗಳಂತೆ ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಘೋಷಿಸಿದೆ.

ಈ ಪ್ರಕರಣದಲ್ಲಿ 2002/ 2005ರ ಯೋಜನೆಗಳಂತೆ ಅರ್ಜಿದಾರರು ಸೇವೆ ಕಾಯಂಗೆ ಅರ್ಹರಾಗಿದ್ದಾರೆ. ಅವರ ಸೇವೆ ಕಾಯಂಗೊಂಡಿದ್ದು, ಅವರ ಕೆಲಸದ ಸ್ವರೂಪ ಮತ್ತು ಸೇವೆ ಮುಂದುವರಿಕೆ ಬಗ್ಗೆ ನಿರ್ಧರಿಸಬೇಕಿದೆ. ಅರ್ಜಿದಾರರನ್ನು ಇತರೆ ಸಿಬ್ಬಂದಿಯಂತೆ ಸಮಾನವಾಗಿ ಕಾಣಬೇಕಿದೆ ಎಂದು ಆದೇಶ ನೀಡಲಾಗಿದೆ.

ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗುವುದಿಲ್ಲ. ಅರ್ಜಿದಾರರು 10 ವರ್ಷಗಳಿಗೂ ಅಧಿಕಾರ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ, ಭತ್ಯೆ ನೀಡಬೇಕಾಗುತ್ತದೆ. ಹಾಗಾಗಿ ಉಮಾದೇವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ಇವರು ಕೂಡ ಸೇವೆ ಕಾಯಂಗೆ ಅರ್ಹರು ಎಂದು ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular