ಬೆಂಗಳೂರು : ರಾಜ್ಯದ ಚಾರಣ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಹೆಚ್ಚಿಸಲು ಅರಣ್ಯ ಇಲಾಖೆ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅಪ್ರಾಪ್ತರು ಮತ್ತು ಹಿರಿಯ ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪೋಷಕರ ಅನುಮತಿ ಮತ್ತು ದೈಹಿಕ ಸಾಮರ್ಥ್ಯದ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಿದ್ದಾರೆ.
ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ. ಯಾವುದೇ ಚಾರಣಿಗರಿಗೆ ಆರೋಗ್ಯ ಸಮಸ್ಯೆ ಕಂಡುಬಂದರೆ ಆರೈಕೆಗಾಗಿ ಗೈಡ್ ತಮ್ಮ ಜೊತೆ ಪ್ರಥಮ ಚಿಕಿತ್ಸಾ ಕಿಟ್ ಅನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ಶೈಕ್ಷಣಿಕ ವರ್ಷದ ಎಂಟು ಸೆಮಿಸ್ಟರ್ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿಯ ದೃಶ್ಯ ಕಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿ.ಯು.ಸಿ.ಗೆ ಸಮಾನಾಂತರ ಕೋರ್ಸು ಮಾಡಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್ ನಿಂದ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆ, ಕಲಾ ಇತಿಹಾಸ ಮತ್ತು ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಜಾಲತಾಣ https://uucms.karnataka.gov.in ಅಥವಾ https:// www.cavamysore.karantaka.gov.in ಮೂಲಕ ಮೇ 30ರೊಳಗಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

