HomeLatest Newsಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ

ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ

ಬೆಂಗಳೂರು: ಬ್ಯಾಟರಿ ಚಾಲಿತ(ಎಲೆಕ್ಟ್ರಿಕ್ ವೆಹಿಕಲ್ಸ್) ಸಾರಿಗೆ ವಾಹನಗಳಿಗೆ ಪರ್ಮಿಟ್ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಾರಿಗೆ ಇಲಾಖೆಯಿಂದ ಪರ್ಮಿಟ್ ಪಡೆಯದೆ ಇದ್ದರೆ ದಂಡ ಕಟ್ಟಬೇಕಾಗುತ್ತದೆ. ಪ್ರಯಾಣಿಕರು ಮತ್ತು ಸರಕು ಸಾಗಣೆ ಉದ್ದೇಶಕ್ಕೆ ಬಳಕೆಯಾಗುವ ಬ್ಯಾಟರಿ ಚಾಲಿತ ಬಸ್, ಆಟೋರಿಕ್ಷಾ, ಕಾರು ಸೇರಿದಂತೆ ಇತರೆ ವಾಹನಗಳಿಗೆ ಪರ್ಮಿಟ್ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಪರ್ಮಿಟ್ ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಕೆಎಸ್ಆರ್ಟಿಸಿ, ಬಿಎಂಟಿಸಿಯಲ್ಲಿರುವ ಇವಿ ಬಸ್ ಗಳೊಂದಿಗೆ ಖಾಸಗಿ ಸಾರಿಗೆ ಬಸ್ ಗಳಿಗೂ ಪರ್ಮಿಟ್ ಪಡೆಯುವುದು ಅನಿವಾರ್ಯವಾಗಿದೆ. ಇವಿ ಬಳಕೆಗೆ ಪ್ರೋತ್ಸಾಹ ನೀಡಲು ವಾಣಿಜ್ಯ ಉದ್ದೇಶಕ್ಕೆ ಬಳಸುವ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ವಾಹನಗಳಿಗೆ ಪರ್ಮಿಟ್ ನಿಂದ ವಿನಾಯಿತಿ ನೀಡಿತ್ತು. ಈ ವಿನಾಯಿತಿಯನ್ನು ಹಿಂಪಡೆಯಲಾಗಿದೆ. ಪರ್ಮಿಟ್ ಪಡೆಯಲು ವಿಧಿಸುವ ಶುಲ್ಕದಿಂದ ಹಸಿರು ವಾಹನಗಳಿಗೆ ವಿನಾಯಿತಿ ನೀಡಲಾಗಿದ್ದು, ಉಚಿತವಾಗಿ ಪರ್ಮಿಟ್ ನೀಡಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular