HomeKarnatakaBREAKING NEWS: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

BREAKING NEWS: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಕಿತ್ತನಹಳ್ಳಿಯಲ್ಲಿ ನಡೆದಿದೆ.

36 ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದವನು. ಮನೆಯಲ್ಲಿಯೇ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಶಿವಕುಮಾರ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.

4 ಲಕ್ಷ ರೂಪಾಯಿ ಸಾಲವಿದೆ. ತೀರಿಸಲು ಕಷ್ಟವಾಗುತ್ತಿದೆ. ಅಮ್ಮ ಹಣ ಕೊಡುತ್ತಿಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಕಳೆದ 6 ತಿಂಗಳಿಂದ ಪತ್ನಿ ಮಾಲಾ ಮನೆ ಬಿಟ್ಟು ತವರು ಸೇರಿದ್ದಾಳೆ. ಸಾಲ ಹಾಗೂ ಪತ್ನಿ ವಿಷಯವಾಗಿ ಮನನೊಂದು ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular