ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತನನ್ನು ಬಂಧಿಸಲಾಗಿದೆ. ಬೆಂಗಳೂರಿನ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಕೇರಳ ಮೂಲದ ಅಮಲ್(23) ಬಂಧಿತ ಆರೋಪಿ. ಈತ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಬಳಿಕ ಒಳ ಉಡುಪು ಧರಿಸಿ ಫೋಟೋ ತೆಗೆದುಕೊಳ್ಳುತ್ತಿದ್ದ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

