ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ : ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಅನಂತ್ ಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ , ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹೆಗಡೆ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಸಂಸದ ಅನಂತ್ ಕುಮಾರ್ ಕುಂಭಕರ್ಣನಿದ್ದಂಗೆ, ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು! ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ,ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

https://twitter.com/INCKarnataka/status/1746752004893114593

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read