HomeLatest NewsSHOCKING : ಬೆಂಗಳೂರಲ್ಲಿ ಸಾಕು ಪ್ರಾಣಿಗಳ ಮಾರಣಹೋಮ : ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಂದು ವಿಕೃತಿ.!

SHOCKING : ಬೆಂಗಳೂರಲ್ಲಿ ಸಾಕು ಪ್ರಾಣಿಗಳ ಮಾರಣಹೋಮ : ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಂದು ವಿಕೃತಿ.!

ಬೆಂಗಳೂರು : ಬೆಂಗಳೂರಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಸಾಕು ಪ್ರಾಣಿಗಳನ್ನ ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ.

ಸಾಕು ಬೆಕ್ಕು, ನಾಯಿಗಳಿಗೆ ಹಿಂಸೆ ನೀಡಿ ಮರಕ್ಕೆ ಕಟ್ಟಿ ಕೊಂದು ವಿಕೃತಿ ಮೆರೆದಿರುವ ಘಟನೆ ಬಾಣಸವಾಡಿ ಪಂಚಮುಖಿ ದೇಗುಲದ ಬಳಿ ನಡೆದಿದೆ. ಕೀಚಕರ ವಿರುದ್ಧ ಪ್ರಾಣಿ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ 4 ದಿನದ ಹಿಂದೆ ಹಲವು ಬೆಕ್ಕಿನ ಮರಿಗಳನ್ನು ತುಂಡಾ ತುಂಡಾಗಿ ಪೀಸ್ ಮಾಡಿ ಎಸೆದು ಹೋಗಿದ್ದರು. ಈಗ ಮತ್ತೆ ನಾಯಿ ಹಾಗೂ ಬೆಕ್ಕಿನ ಮರಿಗಳನ್ನ ಇಲ್ಲಿ ತಂದು ಬರ್ಬರವಾಗಿ ಕೊಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಜಾಗದಲ್ಲಿ ಪ್ರಾಣಿಗಳ ಮಾರಣ ಹೋಮ ಹೆಚ್ಚಾಗಿ ನಡೆಯುತ್ತದೆ. ಸತ್ತ ಪ್ರಾಣಿಗಳ ದುರ್ವಾಸನೆ ಬರುತ್ತದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಎಸಗುವ ಪಾಪಿಗಳಿಗೆ ಶಿಕ್ಷೆಯಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular