HomeKarnatakaBREAKING: ಪ್ರಕರಣ ರದ್ದು ಟೆಕ್ಕಿ ಅತುಲ್ ಸುಭಾಷ್ ಪತ್ನಿ ಸೇರಿ ನಾಲ್ವರಿಂದ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ...

BREAKING: ಪ್ರಕರಣ ರದ್ದು ಟೆಕ್ಕಿ ಅತುಲ್ ಸುಭಾಷ್ ಪತ್ನಿ ಸೇರಿ ನಾಲ್ವರಿಂದ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಪತ್ನಿ ಸೇರಿ ನಾಲ್ವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪತ್ನಿ ನಿಕಿತಾ, ಅತ್ತೆ ನಿಶಾ, ಬಾಮೈದ ಅನುರಾಗ್ ಮತ್ತು ಸಂಬಂಧಿ ಸುಶೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಸಲಾಗಿದೆ.

ಪ್ರಚೋದನೆ ಆರೋಪದ ಅಂಶಗಳು ಇವೆ ಎಂದು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ತನಿಖೆಯ ಸಂದರ್ಭದಲ್ಲಿ ಕಲೆ ಹಾಕಿದ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅಭಿಯೋಜಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular