HomeKarnatakaಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ…!

ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ…!

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ.

ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು.

ರೈತರು, ಸಾರ್ವಜನಿಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸ್ವೀಕರಿಸಿದ್ದು, ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಸಾರ್ವಜನಿಕರು, ರೈತರು ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರೂ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ದುರಂಹಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದಾಗ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular