HomeLatest NewsBREAKING : ರಾಂಚಿಯ RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ? 'ದೊಡ್ಡ ಸಂಚು'...

BREAKING : ರಾಂಚಿಯ RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ? ‘ದೊಡ್ಡ ಸಂಚು’ ಎಂದು ಬಿಜೆಪಿ ಆರೋಪ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿರುವ RSS ಕಚೇರಿಯ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.ಕೇಂದ್ರ ರಾಜ್ಯ ಸಚಿವ ಹಾಗೂ ಜಾರ್ಖಂಡ್‌ನ ಹಿರಿಯ ಬಿಜೆಪಿ ನಾಯಕ ಸಂಜಯ್ ಸೇಠ್ ಅವರ ಪ್ರಕಾರ, ಬುಧವಾರ ಮುಂಜಾನೆ ಸುಮಾರು 12:36 ಗಂಟೆಗೆ ಇಬ್ಬರು ಯುವಕರು RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ಸೇಠ್, “RSS ಕಚೇರಿ ನಮ್ಮ ತಾಯಿ ಸಮಾನ. ಮಧ್ಯರಾತ್ರಿ ಇಬ್ಬರು ಯುವಕರು ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವುದು ದೊಡ್ಡ ಸಂಚಿನ ಸೂಚನೆ ನೀಡುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಹಿರಿಯ ಪೊಲೀಸ್ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ. RSS ಕಚೇರಿ ಸಮೀಪ ಶಾಶ್ವತ ಪೊಲೀಸ್ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನೊಂದೆಡೆ, ರಾಂಚಿ ನಗರ ಉಪ ಪೊಲೀಸ್ ಅಧೀಕ್ಷಕ KV Raman ಮಾತನಾಡಿ, ಘಟನೆ ಸ್ಥಳದಲ್ಲಿ ಎರಡು ಬಾಟಲಿಗಳು ಪತ್ತೆಯಾಗಿದ್ದು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಪ್ರಕರಣದ ತನಿಖೆಗೆ ಸೈಬರ್ ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯ ವೇಳೆ ಕೆಲವು ಶಂಕಿತರ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಸ್ತುತ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/ANI/status/2067107142495346806/video/1

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular