HomeKarnatakaBREAKING NEWS: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಹೊತ್ತಿ ಉರಿದ ಕಾರು

BREAKING NEWS: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಮಂಗಳೂರು: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಲೇಡಿ ಹಿಲ್ ಪೆಟ್ರೋಲ್ ಬಂಕ್ ನಲ್ಲಿ ಮಾರುತಿ 800 ಕಾರಿಗೆ ಪೆಟ್ರೋಲ್ ಹಾಕುತ್ತಿದ್ದಾಗ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ತಕ್ಷಣ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಾರ್ಶ್ವನಾಥ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಬೆಂಕಿ ಕೆನ್ನಾಲಿಗೆಯಲ್ಲಿ ಕಾರು ಸುಟ್ಟು ಕರಕಲಾಗಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿ ನೀರು ಹಾಕಿ ಬೆಂಕಿ ನಂದಿಸಿದ್ದು, ಸಂಭವಿಸಲಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular