HomeLatest NewsSHOCKING NEWS: ಪೆಟ್ರೋಲ್ ಬಂಕ್ ಸಿಬ್ಬಂದಿಯ ಎದೆಗೆ ಗನ್ ಇಟ್ಟು ಬೆದರಿಕೆ ಹಾಕಿದ ಮಹಿಳೆ!

SHOCKING NEWS: ಪೆಟ್ರೋಲ್ ಬಂಕ್ ಸಿಬ್ಬಂದಿಯ ಎದೆಗೆ ಗನ್ ಇಟ್ಟು ಬೆದರಿಕೆ ಹಾಕಿದ ಮಹಿಳೆ!

ಲಖನೌ: ಮಹಿಳೆಯೊಬ್ಬರು ಪೆಟ್ರೋಲ್ ಬಂಕ್ ಸಿಬ್ಬಂದಿಯ ಎದೆಗೆ ಗನ್ ಇಟ್ಟು ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹರ್ದೋಯ್ ನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಿಲ್ ಗ್ರಾಮ್ ಪಟ್ಟಣದ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಸಿಎನ್ ಜಿ ಇಂಧನ ತುಂಬಿಸಲು ಪೆಟ್ರೋಲ್ ಬಂಕ್ ಗೆ ಕುಟುಂಬವೊಂದು ಬಂದಿದೆ. ಈ ವೇಳೆ ಸುರಕ್ಷತೆ ಕಾರಣಕ್ಕೆ ಕುಟುಂಬದವರನ್ನು ವಾಹನದಿಂದ ಕೆಳಗಿಳಿಯುವಂತೆ ಪೆಟ್ರೋಲ್ ಬಂಕ್ ಸಿಬ್ಬಂದಿ ಹೇಳಿದ್ದರು. ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ರಜನೀಶ್ ಕುಮಾರ್ ಎಂಬಾತನ ಜೊತೆ ಮಾತಿಗೆ ಮಾತು ಬೆಳೆಸಿ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಗಲಾಟೆ ಮಾಡಿಕೊಂಡಿದ್ದಾರೆ.

ಇದೇ ವೇಳೆ ಮಹಿಳೆಯೊಬ್ಬಳು ಪೆಟ್ರೋಲ್ ಬಂಕ್ ಸಿಬ್ಬಂದಿಯ ಎದೆಗೆ ಗನ್ ಇಟ್ಟು ಹೆದರಿಸಿದ್ದಾಳೆ. ಗುರುತು ಸಿಗದ ರೀತಿ ಗುಂಡು ಹಾರಿಸಿ ಕೊಲ್ಲುತ್ತೇನೆ ಎಂದು ಧಮ್ಕಿ ಹಾಕಿದ್ದಾಳೆ. ಈ ದೃಶ್ಯ ಪೆಟ್ರೋಲ್ ಬಂಕ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆ ಹಾಗೂ ಕುಟುಂಬದ ವಿರುದ್ಧ ಪೆಟ್ರೋಲ್ ಬಂಕ್ ಸಿಬ್ಬಂದಿ ರಜನೀಶ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular