ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.
ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.
"ರಾಜ್ಯದ ಜನತೆಯ ಕಿವಿಯ ಮೇಲೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ". ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ "ಕರ್ನಾಟಕ ಮಾಡೆಲ್"
ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರಿಗೆ 3 ರೂಪಾಯಿ ಹಾಗೂ ಡಿಸೇಲ್…
1/n pic.twitter.com/tlBmx3RmBg
— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) June 16, 2024
ಕಾಂಗ್ರೆಸ್ ಎಂದರೆ ಲೂಟಿಯ ಗ್ಯಾರಂಟಿ… pic.twitter.com/GMsKLfGTBj
— BJP Karnataka (@BJP4Karnataka) June 16, 2024

