HomeIndiaಇನ್ಶೂರೆನ್ಸ್ ಇಲ್ಲದಿದ್ದರೆ ಪೆಟ್ರೋಲ್ ಸಿಗಲ್ವಾ? ಮಧ್ಯಪ್ರದೇಶದಲ್ಲಿ ಜಾರಿಗೆ ಬರಲಿದೆ ಹೊಸ ನಿಯಮ!

ಇನ್ಶೂರೆನ್ಸ್ ಇಲ್ಲದಿದ್ದರೆ ಪೆಟ್ರೋಲ್ ಸಿಗಲ್ವಾ? ಮಧ್ಯಪ್ರದೇಶದಲ್ಲಿ ಜಾರಿಗೆ ಬರಲಿದೆ ಹೊಸ ನಿಯಮ!

ವಾಹನ ಸವಾರರು ತಮ್ಮ ವಾಹನಗಳಿಗೆ ಸೂಕ್ತವಾದ ಇನ್ಶೂರೆನ್ಸ್ ಮಾಡಿಸದೇ ಇದ್ದರೆ ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಸಿಗುವುದು ಅನುಮಾನ. ರಸ್ತೆ ಸುರಕ್ಷತೆ ಹಾಗೂ ನಿಯಮಗಳ ಪಾಲನೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ಹೊಸ ಪ್ರಯೋಗಕ್ಕೆ ಮುಂದಾಗಿದೆ. ವಾಹನ ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ನಿರಾಕರಿಸುವ ವಿಶಿಷ್ಟ ಪೈಲಟ್ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.

ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರು ಹಾಗೂ ನಿವೃತ್ತ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಇನ್ಶೂರೆನ್ಸ್ ರಹಿತ ವಾಹನಗಳಿರುವ ಒಂದು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಈ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು.

ಈ ವ್ಯವಸ್ಥೆಯಡಿ ಪೆಟ್ರೋಲ್ ಬಂಕ್‌ಗಳಲ್ಲಿ ವಿಶೇಷ ಕ್ಯಾಮೆರಾಗಳನ್ನು ಅಳವಡಿಸಿ, ಅವುಗಳನ್ನು ವಾಹನ್ (VAHAN) ಪೋರ್ಟಲ್ ಹಾಗೂ ಇನ್ಶೂರೆನ್ಸ್ ಡೇಟಾಬೇಸ್‌ನೊಂದಿಗೆ ಲಿಂಕ್ ಮಾಡಲಾಗುತ್ತದೆ. ಪೆಟ್ರೋಲ್ ಬಂಕ್‌ಗೆ ಆಗಮಿಸುವ ವಾಹನದ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ, ಇನ್ಶೂರೆನ್ಸ್ ಅವಧಿ ಮುಗಿದಿದ್ದರೆ ಅಂತಹ ವಾಹನಗಳಿಗೆ ಇಂಧನ ನೀಡದಂತೆ ತಡೆಯುವುದು ಈ ತಂತ್ರಜ್ಞಾನದ ಉದ್ದೇಶವಾಗಿದೆ. ಕೇಂದ್ರ ಸಾರಿಗೆ ಸಚಿವಾಲಯದ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವೇ ಇದನ್ನು ಜಾರಿಗೆ ತರಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಷ್ಟೇ ಅಲ್ಲದೆ, ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯನ್ನು ಸೊನ್ನೆಗೆ ಇಳಿಸುವ ಜೀರೋ ಫ್ಯಾಟಲಿಟಿ ಡಿಸ್ಟ್ರಿಕ್ಟ್ ಯೋಜನೆಯನ್ನು ಪ್ರಸ್ತುತ ಇರುವ ಆರು ಜಿಲ್ಲೆಗಳಿಂದ ಒಂಬತ್ತು ಜಿಲ್ಲೆಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವುಗಳನ್ನು ತಡೆಯಲು ಸ್ಥಳೀಯ ಸಾರ್ವಜನಿಕರ ಸಹಭಾಗಿತ್ವ, ತಂತ್ರಜ್ಞಾನದ ಬಳಕೆ ಹಾಗೂ ತುರ್ತು ಚಿಕಿತ್ಸಾ ಸಮಯವನ್ನು ಇನ್ನಷ್ಟು ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular