HomeKarnatakaಪೆಟ್ರೋಲ್ ಬೆಲೆ ಏರಿಕೆಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ

ಪೆಟ್ರೋಲ್ ಬೆಲೆ ಏರಿಕೆಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ನಾಳೆ ಜೆಡಿಎಸ್ ನಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ ಕೈಗೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ಮೇರೆಗೆ ಜೆಡಿಎಸ್ ವತಿಯಿಂದ ನಾಳೆ ಪ್ರತಿಭಟನೆ ಕೈಗೊಳ್ಳಲಾಗಿದೆ.

ಇಂದು ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಆಗ್ರಹಿಸಲಾಗಿದೆ. ನಾಳೆ ಜೆಡಿಎಸ್ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ರಮೇಶಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಜೆಡಿಎಸ್ ನಿರ್ಧರಿಸಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular