ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು: ಪೆಟ್ರೋಲ್ ಬೆಲೆ ಏರಿಕೆಗೆ ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಈ ಕ್ರಮವನ್ನು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ. ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ಧರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://twitter.com/RAshokaBJP/status/1801936217291833474

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read