ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಹಣದುಬ್ಬರ ನಿಯಂತ್ರಣಕ್ಕೆ ತೆರಿಗೆ ಕಡಿಮೆ ಮಾಡುವಂತೆ ಆರ್‌ಬಿಐ ಶಿಫಾರಸು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಗ್ಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯಂತೆ, ಜನವರಿಯಲ್ಲಿ ಚಿಲ್ಲರೆ ಹಣದುಬ್ಬರ ಮತ್ತೆ ಹೆಚ್ಚಾಗಿದ್ದು, ಆರ್‌ಬಿಐ ನಿಗದಿಪಡಿಸಿದ ಗರಿಷ್ಠ ಮಟ್ಟ ಮೀರಿದೆ. ಚಿಲ್ಲರೆ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಇಂಧನ ಮತ್ತು ಜೋಳದ ಮೇಲಿನ ತೆರಿಗೆ ಕಡಿಮೆ ಮಾಡುವ ಕುರಿತಾಗಿ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇತ್ತೀಚಿನ ದಿನಗಳಲ್ಲಿ ಸ್ಥಿರವಾಗಿದ್ದರೂ, ಕಂಪನಿಗಳು ಬೆಲೆ ಇಳಿಕೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಿಲ್ಲ. ಕೇಂದ್ರ ಸರ್ಕಾರ ಇಂಧನ ಮೇಲಿನ ತೆರಿಗೆ ಕಡಿಮೆ ಮಾಡಿದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿ ಹಣ ದುಬ್ಬರ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಜೋಳದ ಮೇಲಿನ ಆಮದು ಸುಂಕವನ್ನು ಕೂಡ ಕಡಿಮೆ ಮಾಡಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read