ನಾಳೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆ.24 ರ ನಾಳೆ ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ನಾಳೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಮಧ್ಯಾಹ್ನ 02.30ರಿಂದ ಸಂಜೆ 04.30ರವರೆಗೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read