HomeKarnatakaಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ; ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿ ನಿಷೇಧಾಜ್ಞೆ

ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ; ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿ ನಿಷೇಧಾಜ್ಞೆ

ಬಳ್ಳಾರಿ: ಜಿಲ್ಲೆಯಲ್ಲಿ ಸೆ.24ರಂದು ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಬಂಧಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಅಂದು ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಆದೇಶವು ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular