ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜುಲೈ 13, 14 ಪಿಜಿ ಪ್ರವೇಶ ಪರೀಕ್ಷೆ: ಕೆಇಎ ಅರ್ಜಿ ಆಹ್ವಾನ

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 13, 14 ರಂದು ಪಿಜಿಸಿಇಟಿ -24 ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

ಎಂಬಿಎ, ಎಂಸಿಎ, ಎಂಟೆಕ್, ಎಂಇ, ಎಂ ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಜುಲೈ 13, 14 ರಂದು ನಡೆಯಲಿದೆ. ಮೇ 27ರಿಂದ ಪಿಜಿಸಿಇಟಿಗೆ ಅರ್ಜಿ ಸಲ್ಲಿಸಬಹುದು. ಜೂನ್ 17 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು. ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಪಿಜಿಸಿಇಟಿಗೆ ಹಾಜರಾಗುವ ಅಗತ್ಯ ಇಲ್ಲ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುವುದು.

ಜುಲೈ 13ರಂದು ಎಂಇ, ಎಂಟೆಕ್, ಎಂ ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶ ಪರೀಕ್ಷೆ ನಡೆಯಲಿದೆ. ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read