ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಾತಿಗೆ ಸಂಬಂಧಿಸಿದ 2024ನೇ ಸಾಲಿನ ಪಿಜಿ -ಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಆ. 4ರಂದು ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ಪಿಜಿ –ಸಿಇಟಿಗೆ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 27 ರಿಂದ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಆ. 4ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2:30 ವರೆಗೆ ಎಂಸಿಎ ಪರೀಕ್ಷೆ, ಮಧ್ಯಾಹ್ನ 2:30 ರಿಂದ ಸಂಜೆ 4:30ವರೆಗೆ ಎಂಬಿಎ ಪರೀಕ್ಷೆ ನಡೆಯಲಿದೆ. ಪ್ರಾಧಿಕಾರದ ವೆಬ್ಸೈಟ್ https://kea.kar.nic.in ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.