HomeKarnatakaಪಿಜಿಗಳಲ್ಲಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಗ್ಯಾಂಗ್ ಅರೆಸ್ಟ್

ಪಿಜಿಗಳಲ್ಲಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಪಿಜಿಗಳನ್ನೇ ಟಾರ್ಗೆಟ್ ಮಾಡಿ ವಿದ್ಯಾರ್ಥಿಗಳಂತೆ ನಟಿಸಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಗ್ಯಾಂಗ್ ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯಶವಂತಪುರ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವರಾಜು, ಪ್ರಭು, ಸೆಲ್ವರಾಜು ಬಂಧಿತ ಆರೋಪಿಗಳು. ಬಂಧಿತರಿಂದ 16ಲಕ್ಷ ಮೌಲ್ಯದ 50 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದೆ. 7 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ಲ್ಯಾಪ್ ಟಾಪ್ ಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಸ್ಟೂಡೆಂಟ್ ಗಳಂತೆ ಪಿಜಿಗಳ ಬಳಿ ಹೋಗಿ ನಿಲ್ಲುತ್ತಿದ್ದ ಆರೋಪಿಗಳು ರೂಮಿನಲ್ಲಿ ಯಾರೂ ಇಲ್ಲದಿರುವುದನ್ನು ನೋಡಿಕೊಂಡು ಲ್ಯಾಪ್ ಟಾಪ್ ಗಳನ್ನು ಕದ್ದು ಪರಾರಿಯಾಗುತ್ತಿದ್ದರು. ಬಂಧಿತ ಆರೋಪಿಗಳಲ್ಲಿ ಇಬ್ಬರು ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದು, ಓರ್ವ ತಮಿಳುನಾಡು ಮೂಲದವನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular