ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.10ರಂದು ಬೆಳಿಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ.
ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆ.10ರಂದು ಸಂಜೆ 5 ಗಂಟೆ ಹಾಗೂ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆ.11ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ.
ಸೀಟು ಹಂಚಿಕೆಯಾದವರು ಫೆ.12ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆ.14ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.
ವಿವರಗಳಿಗೆ ಆಗಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನೋಡಲು ಕೋರಲಾಗಿದೆ.

