ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ, ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎದುರಾಗಿರುವ ಕೆಲವು ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಅಕ್ಟೋಬರ್ 15ರಂದು ಬೆಳಿಗ್ಗೆ 11 ಗಂಟೆ ಒಳಗೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#PGNEET-25: #PGMedical/ Diploma ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 15ರಂದು ಬೆಳಿಗ್ಗೆ 11 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 8, 2025
– ಎಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ@CMofKarnataka @drmcsudhakar @KEA_karnataka pic.twitter.com/HtzMeadxMK