HomeKarnatakaಪಿಜಿ- ನೀಟ್: ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಜ. 21ರವರೆಗೆ ಅವಕಾಶ

ಪಿಜಿ- ನೀಟ್: ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಜ. 21ರವರೆಗೆ ಅವಕಾಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಬಯಸಿದ ಅರ್ಹ ಅಭ್ಯರ್ಥಿಗಳ ದಾಖಲೆ ಸಲ್ಲಿಕೆಗೆ ಜನವರಿ 21ರವರೆಗೆ ಅವಕಾಶ ನೀಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ಸಲ್ಲಿಕೆಗೆ ಇದ್ದ ದಿನಾಂಕವನ್ನು ಜನವರಿ 21ರ ವರೆಗೆ ವಿಸ್ತರಿಸಿದೆ. ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಬಯಸಿದ ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ.

PG NEET-24 ಪ್ರವೇಶಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿರುವವರ ಮೂಲ ದಾಖಲೆಗಳ ಪರಿಶೀಲನೆ ಮತ್ತು ದಾಖಲೆ ಸಲ್ಲಿಸಲು ಜ.21ರವರೆಗೂ ದಿನಾಂಕ ವಿಸ್ತರಿಸಲಾಗಿದೆ. ಜ.18, 20 ಮತ್ತು 21ರಂದು ದಾಖಲೆಗಳ ಪರಿಶೀಲನೆ & ಸಲ್ಲಿಕೆಗೆ ಅವಕಾಶ ಇರುತ್ತದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular