HomeKarnatakaBREAKING : PGCET ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್; ಮೊದಲ ಸುತ್ತಿನಲ್ಲಿ ಸೀಟು ಪಡೆದವರಿಗೆ 4 ಚಾಯ್ಸ್ ದಾಖಲಿಸಲು...

BREAKING : PGCET ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್; ಮೊದಲ ಸುತ್ತಿನಲ್ಲಿ ಸೀಟು ಪಡೆದವರಿಗೆ 4 ಚಾಯ್ಸ್ ದಾಖಲಿಸಲು ಅವಕಾಶ!

ಬೆಂಗಳೂರು :  PGCET-2026ರ ಮೂಲಕ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಹಾಗೂ ಎಂ.ಆರ್ಕ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಹತ್ವದ ಮಾಹಿತಿ ನೀಡಿದೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ನಾಲ್ಕೂ ಚಾಯ್ಸ್‌ಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 13ರ ಬೆಳಿಗ್ಗೆ 10 ಗಂಟೆಯವರೆಗೆ ಆಯ್ಕೆಗಳನ್ನು ಸಲ್ಲಿಸಬಹುದು.

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅ.13ರಂದು ಬೆಳಿಗ್ಗೆ 10ಗಂಟೆವರೆಗೆ ಚಾಯ್ಸ್ ಹಾಕಬಹುದು. ಈಗಾಗಲೇ ಕಾಲೇಜುಗಳಲ್ಲಿ ಪ್ರವೇಶ ಪಡೆದವರು ಕೂಡ ಚಾಯ್ಸ್ ಹಾಕಬಹುದು. ಅಲ್ಲದೆ ಅ.13ರಂದು ಮಧ್ಯಾಹ್ನ 2ರಿಂದ ಅ.15ರ ಬೆಳಿಗ್ಗೆ 10ಗಂಟೆವರೆಗೆ ಆಪ್ಷನ್ಸ್ ಅನ್ನು ಮೇಲೆ-ಕೆಳಗೆ (rearrange) ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನೂ ಎರಡು ಸುತ್ತಿನ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಬೇಕೆಂದು ಹಾಗೂ ಯುಜಿ ಮತ್ತು ಪಿಜಿ ಕೋರ್ಸ್ ಗಳ ಪ್ರವೇಶಕ್ಕೆ ಪ್ರತ್ಯೇಕ ವೇಳಾಪಟ್ಟಿ ನೀಡಲು ಎಐಸಿಟಿಎ ಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಎಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತೀರ್ಮಾನದವರೆಗೆ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ  ಹೆಚ್.ಪ್ರಸನ್ನ ಪ್ರಕಟಣೆ ಹೊರಡಿಸಿದ್ದಾರೆ.

ಏಷ್ಯನ್ ಪ್ಯಾರಾ ಗೇಮ್ಸ್‌ಗೂ ಮುನ್ನ ಭಾರತೀಯ ಪ್ಯಾರಾ ಶೂಟರ್‌ಗಳ ಪ್ರತಿಭಟನೆ

ನವದೆಹಲಿ: 2026ರ ಐಚಿ-ನಗೋಯಾ ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಭಾರತೀಯ ಕ್ರೀಡಾಪಟುಗಳ ತಂಡವನ್ನು ಬೀಳ್ಕೊಡುವ ಅಧಿಕೃತ ಸಮಾರಂಭದ ವೇಳೆ, ಪ್ಯಾರಾಲಿಂಪಿಕ್ ಸಮಿತಿ ಆಫ್ ಇಂಡಿಯಾ (PCI) ವಿರುದ್ಧ ಭಾರತೀಯ ಪ್ಯಾರಾ ಶೂಟರ್‌ಗಳು ಶುಕ್ರವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನವದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನ ಹೊರಗೆ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಎಸ್‌ಎಚ್‌1 ವಿಭಾಗದ ಪ್ಯಾರಾ ಶೂಟರ್‌ಗಳಾದ ಸಂದೀಪ್ ಕುಮಾರ್ ಮತ್ತು ಆಕಾಶ್, ಕ್ರೀಡಾಪಟುಗಳ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಹಾಗೂ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಕೆಲವೇ ದಿನಗಳು ಬಾಕಿ ಇರುವಾಗ ನೀತಿಯನ್ನು ಬದಲಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.2026ರ ಐಚಿ-ನಗೋಯಾ ಏಷ್ಯನ್ ಪ್ಯಾರಾ ಗೇಮ್ಸ್ ಅಕ್ಟೋಬರ್ 18ರಿಂದ 24ರವರೆಗೆ ನಡೆಯಲಿವೆ.

ಇದಕ್ಕೂ ಮೊದಲು, ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿ, ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಪ್ಯಾರಾ ಗೇಮ್ಸ್‌ಗೆ ತೆರಳುವ ಭಾರತೀಯ ತಂಡಕ್ಕೆ ಅಧಿಕೃತವಾಗಿ ಬೀಳ್ಕೊಟ್ಟರು.

ಪ್ಯಾರಾಲಿಂಪಿಕ್ ಸಮಿತಿ ಆಫ್ ಇಂಡಿಯಾ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ದೇವೇಂದ್ರ ಝಝಾರಿಯಾ ಸೇರಿದಂತೆ ಹಲವು ಪ್ರಮುಖ ಪ್ಯಾರಾ ಕ್ರೀಡಾಪಟುಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಕ್ರೀಡಾಪಟುಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ PCI ಅಧ್ಯಕ್ಷ ದೇವೇಂದ್ರ ಝಝಾರಿಯಾ, ಸಮಿತಿಯು ಕ್ರೀಡಾಪಟುಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರ ಸಮಸ್ಯೆಗಳ ಕುರಿತು ಚರ್ಚಿಸುತ್ತಿದೆ ಎಂದು ತಿಳಿಸಿದರು.

“ನಾವು ಕ್ರೀಡಾಪಟುಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಅವರೊಂದಿಗೆ ಪ್ರತಿಯೊಂದು ವಿಷಯವನ್ನೂ ಚರ್ಚಿಸುತ್ತೇವೆ. ವೈಯಕ್ತಿಕ ಅಭಿಪ್ರಾಯಗಳು ಭಿನ್ನವಾಗಿರಬಹುದು. ಆದರೆ ಪ್ರತಿಭಟನೆ ನಡೆಸುವ ಅಗತ್ಯವಿರಲಿಲ್ಲ ಎಂದು ನನಗೆ ಅನಿಸುತ್ತದೆ. ಅವರು ಪ್ರತಿಯೊಂದು ಸಮಸ್ಯೆಯ ಬಗ್ಗೆಯೂ ನಮ್ಮೊಂದಿಗೆ ಮಾತನಾಡುತ್ತಾರೆ. ಕ್ರೀಡಾಪಟುಗಳೇ ನಮಗೆ ಮೊದಲ ಆದ್ಯತೆ” ಎಂದು ಅವರು ಹೇಳಿದರು.

ಪ್ರಮೋದ್ ಭಗತ್, ಭವಿನಾ ಪಟೇಲ್‌ಗೆ ಧ್ವಜಧಾರಿಗಳ ಗೌರವ

ಏಷ್ಯನ್ ಪ್ಯಾರಾ ಗೇಮ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳಾದ ಪ್ರಮೋದ್ ಭಗತ್ ಮತ್ತು ಭವಿನಾ ಪಟೇಲ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಅಕ್ಟೋಬರ್ 18ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಈ ಇಬ್ಬರು ಕ್ರೀಡಾಪಟುಗಳು ಭಾರತೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular