HomeKarnatakaಎಂಬಿಎ, ಎಂಸಿಎ ಇತರೆ ಕೋರ್ಸ್ ಪ್ರವೇಶಕ್ಕೆ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ

ಎಂಬಿಎ, ಎಂಸಿಎ ಇತರೆ ಕೋರ್ಸ್ ಪ್ರವೇಶಕ್ಕೆ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: PGCET-26: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಅ.9ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.11ರವರೆಗೆ ಅವಕಾಶ ನೀಡಲಾಗಿದೆ. ಅ.10ರಂದು ಸಾರ್ವತ್ರಿಕ ರಜೆ ಇರುವುದನ್ನು ಗಮನಿಸುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

UGNEET-26: ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಆಪ್ಷನ್ಸ್ ದಾಖಲಿಸಲು ಅ.7ರಂದು ಮಧ್ಯಾಹ್ಬ 2 ಗಂಟೆಯಿಂದ ಅ.12ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ.

ಯುಜಿ ನೀಟ್ ರಾಂಕ್ ಇರುವ ಅರ್ಹರು ಆಪ್ಷನ್ಸ್ ದಾಖಲಿಸಬಹುದು. ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆದಿರುವ ಹಾಗೂ 3ನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿರುವವರು ಆಯುಷ್ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ಈಗಾಗಲೇ ಅರ್ಜಿ ಸಲ್ಲಿಸಿ, ವೆರಿಫಿಕೇಷನ್ ಸ್ಲಿಪ್ ಹೊಂದಿರುವ ಅಭ್ಯರ್ಥಿಗಳು ಮಾತ್ರ ಆಪ್ಷನ್ಸ್ ದಾಖಲಿಸಬಹುದು.

ಸೀಟು ಹಂಚಿಕೆಯಾಗಿ ಈಗಾಗಲೇ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ದಾಖಲೆ ಪಡೆಯುವುದನ್ನು ಖಾತರಿಪಡಿಸಿಕೊಂಡ ನಂತರವೇ ಆಪ್ಷನ್ಸ್ ದಾಖಲಿಸುವ ಕೆಲಸ ಮಾಡಿ. ಆಪ್ಷನ್ಸ್ ದಾಖಲಿಸಿ, ಸೀಟು ಹಂಚಿಕೆ ನಂತರ ದಾಖಲೆ ಇಲ್ಲದೆ ಪರದಾಡಬೇಡಿ. ಒಮ್ಮೆ ಆಯುಷ್ ಸೀಟು ಹಂಚಿಕೆ ನಂತರ ಹಿಂದಿನ ಸೀಟು ತನ್ನಿಂದಾನೆ ರದ್ದಾಗಲಿದೆ. ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಿ.

ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ / ಸ್ಥಾನಿಕ ಸಂಪಾದಕರ / ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು  ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾ ಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಸಮೀಪದ ಗ್ರಾಮ-1 ಕೇಂದ್ರದಲ್ಲಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.

ರಾಜ್ಯದ  ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಗ್ರಾಮ-1 ಕೇಂದ್ತದ ಮೂಲಕ 2026 ರ ಅಕ್ಟೋಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular