HomeKarnatakaಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ

ಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ.

ಪಿಜಿಇಟಿ -ಎಂಡಿಎಸ್ ಕೋರ್ಸ್ ಗಳ ಸೀಟು ಹಂಚಿಕೆಯನ್ನು ಆಗಸ್ಟ್ 3ರಿಂದ ಆರಂಭಿಸಲಿದ್ದು, ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದರೂ ಮುಂದಿನ ಸುತ್ತಿನ ಕೌನ್ಸೆಲಿಂಗ್ ಗೆ ಆಯ್ಕೆ ಮಾಡಿಕೊಂಡಿರುವ ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆಗಸ್ಟ್ 3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಿದೆ. ದಾಖಲೆ ಸಲ್ಲಿಸದಿದ್ದರೆ ಅಂತವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಗಸ್ಟ್ 3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುವುದು. ಆಗಸ್ಟ್ 4ರಿಂದ 6ರವರೆಗೆ ಆಯ್ಕೆ ದಾಖಲಿಸಲು ಕಾಲಾವಕಾಶ ನೀಡಲಾಗುವುದು. ಆಗಸ್ಟ್ 7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆಗಸ್ಟ್ 8ರಂದು ಅಂತಿಮ ಫಲಿತಾಂಶ ಪ್ರಕಟಿಸಲಿದ್ದು, ಆಗಸ್ಟ್ 13 ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆಯ ದಿನ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular